www.karnatakatv.net: ರಾಜ್ಯ- ಬೆಂಗಳೂರು- ಬೋಯಿಂಗ್ ಸಂಸ್ಥೆಯ ಸೆಲ್ಕೋ ಮತ್ತು ಡಾಕ್ಟರ್ಸ್ ಫಾರ್ ಯು ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್- ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿದ್ರು. ಅತಿ ಕಡಿಮೆ ಅವಧಿಯಲ್ಲಿ ಕೋವಿಡ್ ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ರು. ಕಾರ್ಪೊರೇಟ್ ಕಂಪನಿಗಳು ಸಾಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಕೋವಿಡ್ ಅಲೆ ನಿಯಂತ್ರಣ ಮತ್ತು ಚಿಕಿತ್ಸೆಯಲ್ಲಿ ಭಾಗಿಯಾಗಿರುವುದು ಶ್ಲಾಘನೀಯ. ಕರ್ನಾಟಕ ವಿದ್ಯುತ್ ನಿಗಮ ಆಸ್ಪತ್ರೆ ನಿರ್ಮಾಣಕ್ಕೆ ಒದಗಿಸಿದ್ದ ಅರ್ಧ ಎಕರೆ ಜಾಗದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನ ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ ಎಂದ್ರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಮತ್ತಿತರರು ಉಪಸ್ಥಿತರಿದ್ರು.