Thursday, December 4, 2025

Latest Posts

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

- Advertisement -

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಈ ಭೇಟಿಯ ವೇಳೆ ನಿರ್ಮಲಾ ಸೀತಾರಾಮನ್ ಅವರು ರೈತ ಪ್ರಮುಖರು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನ ಸಂಸ್ಕರಣಾ ಘಟಕಗಳು ಹಾಗೂ ಕಾಮನ್ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ರಾಜ್ಯ ಸರ್ಕಾರ NDRF ನೆರೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸುತ್ತಿರುವ ಸಮಯದಲ್ಲಿ ವಿತ್ತ ಸಚಿವೆ ಈ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ತಮ್ಮ ‘X’ ಖಾತೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಟೋಬರ್ 15 ರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೇನೆ. ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಈ ಪ್ರದೇಶದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಕೃಷಿ ಮೌಲ್ಯವರ್ಧನೆ ಘಟಕ ಸ್ಥಾಪಿಸಲಾಗಿದೆ. ಅವುಗಳ ಕಾರ್ಯಚಟುವಟಿಕೆ ವೀಕ್ಷಣೆ ಹಾಗೂ ರೈತರೊಂದಿಗೆ ಸಂವಾದ ನಡೆಸಲಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಬಳಸಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಘಟಕವನ್ನು ಸ್ಥಾಪಿಸಲಾಗಿದೆ. ಈ ಪ್ರವಾಸದ ವೇಳೆ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಘಟಕಗಳ ಉದ್ಘಾಟನೆ ನಡೆಯಲಿದೆ. ಮಂಗಳವಾರ (ಅಕ್ಟೋಬರ್ 14) ರಂದು ಅವರು ಧಾರವಾಡದಲ್ಲಿ ನಡೆಯಲಿರುವ ಮತ್ತೊಂದು ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss