Sunday, April 13, 2025

Latest Posts

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

- Advertisement -

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು.

ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೋಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.

ಅಂತೆಯೇ, ಬಿಜಾಪುರ ಹೋಗಿ ವಿಜಯಪುರ ಆಗಿರುವ ಜಿಲ್ಲೆಗೆ ʼಬಸವೇಶ್ವರ ಜಿಲ್ಲೆʼ ಎಂದು ನಾಮಕರಣ ಮಾಡಬೇಕೆಂಬ ಧ್ವನಿಯೂ ಕೇಳಿಬಂದಿದೆ. ಯಾವುದಕ್ಕೇ ಆಗಲಿ ಬಸವೇಶ್ವರರ ಹೆಸರನ್ನು ಇಡುವುದಕ್ಕೆ ನಮ್ಮ ಯಾರ ವಿರೋಧವೂ ಇಲ್ಲ. ವೈಯಕ್ತಿಕವಾಗಿ ನಾನಂತೂ ಬಸವಣ್ಣನವರ ಅಪ್ಪಟ ಅನುಯಾಯಿ. ಆದರೆ, ಹೆಸರು ಬದಲಾವಣೆ ಮಾಡುವುದಕ್ಕೆ ಮುಂಚೆ ಇತರ ಹತ್ತು ಹಲವು ಸಾಧಕ ಬಾಧಕಗಳ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್ ವಿವರಿಸಿದರು.

ಕರ್ನಾಟಕದ ಹೆಸರು ʼಬಸವೇಶ್ವರ ನಾಡುʼ?
ಕರ್ನಾಟಕ ರಾಜ್ಯದ ಹೆಸರನ್ನು ʼಬಸವೇಶ್ವರ ನಾಡುʼ ಎಂದು ಬದಲಾಯಿಸುವ ಪ್ರಸ್ತಾವ ಇದೆಯೇ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತಹ ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ಪ್ರತೀಕ ಎಂದು ಪರಿಗಣಿಸಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲಿ ಬಸವೇಶ್ವರ ಅವರನ್ನು ಸಾಂಸ್ಕೃತಿಕ ಪ್ರತೀಕವಾಗಿ ಪರಿಗಣಿಸಬೇಕು ಎಂಬ ಬೇಡಿಕೆಗಳು ಇವೆ ಎಂದರು.

ಡಿಕೆಶಿ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್; ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ

Chilli: ಮೆಣಸಿನಕಾಯಿ ಬೆಳೆ ಉಳಿಸಲು ಹೊಸ ಮಾರ್ಗ ಕಂಡುಕೊಂಡ ಕೊಪ್ಪಳದ ರೈತ!

Tehsildar Vehicle : ರಸ್ತೆ ಮಧ್ಯೆ ಕೆಟ್ಟು ನಿಂತ ತಹಸೀಲ್ದಾರ್ ವಾಹನ

- Advertisement -

Latest Posts

Don't Miss