Political News: ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ, ದೇವರಾಜೇಗೌಡರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ನನ್ನ ವಿರುದ್ಧ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್‌ಐಆರ್ ರದ್ದು ಮಾಡಬೇಕು ಎಂದು ದೇವರಾಜೇಗೌಡ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಈ ವೇಳೆ ದೇವರಾಜೇಗೌಡ ಪರ ವಕೀಲರಾದ ಪ್ರಮಿಳಾ ನೇಸರ್ಗಿ, ಶಶಿಧರ್ ಬೆಳಗುಂಬ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರು ತುದಿಗಾಲಲ್ಲಿ ನಿಂತಿದ್ದಾರೆಂದು ಆರೋಪಿಸಿದ್ದರು. ಅಲ್ಲದೇ, ವಿನಾಕಾರಣ ನೋಟೀಸ್ ನೀಡಿ, ಕಿರುಕುಳ ನೀಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ವಿಚಾರಣೆ ನಡೆದು ಬಳಿಕ ತೀರ್ಪು ನೀಡಿದ್ದು, ದೇವರಾಜೇಗೌಡ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇನ್ನು ಏನಿದು ಪ್ರಕರಣ ಎಂದು ನೋಡಿದರೆ, ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು, ದೇವರಾಜೇಗೌಡ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ತಮ್ಮ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದರು ಎಂದು ಎಫ್‌ಐಆರ್ ದಾಖಲಿಸಿದ್ದರು.