Saturday, July 13, 2024

Latest Posts

ದರ್ಶನ್ ಬೇಡ..ವಿಜಯಲಕ್ಷ್ಮಿ ಖಡಕ್ ನಿರ್ಧಾರ..?: ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಅನ್​ಫಾಲೋ ಮಾಡಿದ ಪತ್ನಿ!

- Advertisement -

Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಂಧನವಾಗಿದ್ದು, ಪತ್ನಿ ವಿಜಯಲಕ್ಷ್ಮೀ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧ ವಿಜಯಲಕ್ಷ್ಮೀ ಅವರು ಮೌನ ವಹಿಸಿದ್ದು, ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ಫ್ರೊಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೇ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಗೆಳತಿ ಪವಿತ್ರಾಗೌಡ ವಿಚಾರದಲ್ಲಿ ಡಿಬಾಸ್ ಪದೇ ಪದೇ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿ ದರ್ಶನ್ ಬಂಧನವಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದು ಸಹಜವಾಗಿಯೇ ವಿಜಯಲಕ್ಷ್ಮಿಯವರಿಗೆ ಪವಿತ್ರಾ ಗೌಡ ಮೇಲೆ ಕೆಟ್ಟ ಕೋಪ ಬರುವಂತೆ ಮಾಡಿರುತ್ತದೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಕಳೆದ ಎರಡ್ಮೂರು ತಿಂಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿಯರು ಇನ್‌ಸ್ಟಾದಲ್ಲಿ ಪವಿತ್ರಾ ಗೌಡ ಪತಿ ಹಾಗೂ ಮಗಳ ಬಗ್ಗೆ ಫೋಟೋಗಳನ್ನು ಶೇರ್ ಮಾಡಿ ಮಾತಿನ ದಾಳಿ ನಡೆಸಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳಲ್ಲೇ ಎರಡು ಬಣವಾಯ್ತು.

ಒಂದಿಷ್ಟು ಅಭಿಮಾನಿ ಬಳಗ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರನ್ನು ಇಷ್ಟಪಡುತ್ತಿತ್ತು. ಮತ್ತೊಂದು ಅಭಿಮಾನಿಗಳು ಪವಿತ್ರಾಗೌಡ ಅವರನ್ನು ಅತ್ತಿಗೆ ಎಂದು ಕರೆಯುತ್ತಿತ್ತು. ಹಾಗೆಯೇ, ಇನ್ನು ಕೆಲವರು ದರ್ಶನ್ ಹಾಗೂ ವಿಜಯಲಕ್ಷ್ಮೀ ಜೀವನದಲ್ಲಿ ಪವಿತ್ರಾಗೌಡ ಎಂಟ್ರಿ ಆಗ್ತಿರೋದನ್ನು ವಿರೋಧಿಸಿದ್ದರು. ಹತ್ಯೆಯಾದ ರೇಣುಕಾಸ್ವಾಮಿ ಕೂಡ ಪವಿತ್ರಾಗೌಡ ಪೋಸ್ಟ್‌ಗೆ ಬೇಸರದಿಂದ ಕಾಮೆಂಟ್ ಮಾಡುತ್ತಿದ್ದರು. ಇದೀಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ. ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ.

ಈ ಮೊದಲು ವಿಜಯಲಕ್ಷ್ಮೀ ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ದರ್ಶನ್ ಜೈಲು ಸೇರಿದ ದುಃಖದಲ್ಲೇ ಈ ರೀತಿ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನೂ, ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡಗೆ ಇದೀಗ ಕೆಟ್ಟ ಮೇಲೆ ಬುದ್ಧಿ ಬಂದಿದೆ. ಕೈಗೆ ಕೋಳ ಬಿದ್ದ ಮೇಲೆ ಜ್ಞಾನೋದಯವಾಗಿದ್ದು, ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ.

ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ. ದರ್ಶನ್‍ಗೆ ಮೆಸೇಜ್ ಬಗ್ಗೆ ಹೇಳಿ ಘನಘೋರ ತಪ್ಪು ಮಾಡಿಕೊಂಡೆ. ಅಶ್ಲೀಲ ಮೆಸೇಜ್ ತೋರಿಸಿ ಘಟನೆ ಬಗ್ಗೆ ಹೇಳಿದ್ದೇ ಇಷ್ಟೆಲ್ಲಾ ಆಯ್ತು ಎಂದು ಪೊಲೀಸರ ಮುಂದೆ ಹೇಳಿದ್ದಾರೆ.

ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ಮಿಲಿಟರಿ ವಿಮಾನ ಪತನ: ಮಲಾವಿಯ ಉಪಾಧ್ಯಕ್ಷ ಸೇರಿ 9 ಜನರ ದುರ್ಮರಣ

ಪತ್ನಿ ಈ ಕೆಲಸ ಮಾಡುವುದಿಲ್ಲವೆಂದು ಡಿವೋರ್ಸ್‌ ಕೇಳಿದ ಪತಿ: ಈ ರೀತಿ ತೀರ್ಪು ನೀಡಿದ ಕೋರ್ಟ್

- Advertisement -

Latest Posts

Don't Miss