Sunday, December 1, 2024

Latest Posts

ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political News: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದ್ದು, ಈ ಬಗ್ಗೆ ಹಲವು ಗೊಂದಲಗಳು ಉಂಟಾಗಿದೆ. ಅಲ್ಲದೇ, ಈ ಬಗ್ಗೆ ಹಲವರು ಆಕ್ರೋಶ ಹೊರಹಾಕಿರುವ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿರುವ ಸಿಎಂ, ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದಿದ್ದಾರೆ.

ಅಲ್ಲದೇ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರೈತರಿಗೆ ಸಮಸ್ಯೆ ಆಗಬಾರದು ಎಂಬ ನಮ್ಮ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss