- Advertisement -
ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ.
ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು ಪ್ರಧಾನಿ ನರೇಂದ್ರ ಮೋದಿ ಭಾರತ-ಕೇಂದ್ರ ಏಷ್ಯಾ ವರ್ಚ್ಯುಯಲ್ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ.
ಶೃಂಗಸಭೆಯಲ್ಲಿ ಕಝಕಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ, ತುರ್ಮೇನಿಸ್ತಾನ ಹಾಗೂ ಉಜ್ಬೇಕಿಸ್ತಾನಗಳ ಸರ್ಕಾರದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ.
- Advertisement -