Sunday, December 1, 2024

Latest Posts

ಮುಂದಿನ ವರ್ಷದಿಂದ SSLCಗೆ ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ: ಸಚಿವ ಮಧು ಬಂಗಾರಪ್ಪ

- Advertisement -

Political News: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಡಲಾಗುವುದಿಲ್ಲವೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಹಾಗಾಗಿ ಮುಂದಿನ ವರ್ಷದಿಂದ ಹತ್ತನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡಲಾಗುವುದಿಲ್ಲವೆಂದು ಹೇಳಿದ್ದಾರೆ.

ಈ ವರ್ಷ 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಜ್ಯದ ಒಟ್ಟು ಫಲಿತಾಂಶ ಶೇ.73 ರಷ್ಟಿದೆ. ಆದರೆ ಕಳೆದ ಬಾರಿ ಶೇ.10ರಷ್ಟು ಫಲಿತಾಂಶ ಹೆಚ್ಚಾಗಿತ್ತು. ಆದರೆ ಈ ವರ್ಷ ಕೃಪಾಂಕ ನೀಡಿದರೂ ಕೂಡ, ಉತ್ತಮ ಫಲಿತಾಂಶ ಬರಲಿಲ್ಲ. ಹಾಗಾಗಿ ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದು, ಈ ಬಾರಿ ಹತ್ತನೇ ತರಗತಿ ಮಕ್ಕಳಿಗೆ ಗ್ರೇಸ್‌ಮಾರ್ಕ್ಸ್ ಸಿಗುವುದಿಲ್ಲವೆಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

- Advertisement -

Latest Posts

Don't Miss