www.karnatakatv.net:ರಾಜ್ಯ– SSLC ವಿದ್ಯಾರ್ಥಿಗಳ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಜಟಾಪಟಿ ಶುರುವಾಗಿದ್ದು. ಈ ಸಂಬಂಧ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ SSLC ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದ್ರು. ಈ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೆ.ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಸ್ಪಷ್ಟೀಕರಣ ನೀಡಿದ್ದಾರೆ. ಶಿಕ್ಷಣ ಸಚಿವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ ಪರೀಕ್ಷೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಸಮಗ್ರವಾಗಿ ಚರ್ಚಿಸಿ, ವಿದ್ಯಾರ್ಥಿಗಳು ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಠಿಸುವುದು ಅನಗತ್ಯ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ.