Wednesday, April 16, 2025

Latest Posts

ನಮ್ಮ ಕುಟುಂಬದ ಯಾವುದೇ ಸದಸ್ಯರು ರಾಜಕೀಯಕ್ಕೆ ಬರಲ್ಲಾ : ಡಿಕೆಶಿ

- Advertisement -

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ.ಶಿ ವಕುಮಾರ್‌, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಆಗಾಗ್ಗೆ ಈ ಕುರಿತು ಗೊಂದಲಗಳು ಸೃಷ್ಟಿಯಾಗುತ್ತಿವೆ. ಅಂತಹ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

- Advertisement -

Latest Posts

Don't Miss