Friday, November 22, 2024

Latest Posts

‘ಬಿಜೆಪಿಯವರು ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ’

- Advertisement -

Political News: ಇಂದು ನೆಹರುರವರ ಜನ್ಮದಿನವಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರೆಲ್ಲ ಸೇರಿ, ನೆಹರುರವರ ಜನ್ಮ ದಿನಾಚರಣೆ ಆಚರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನೆಹರುರವರು ಯಾವ ರೀತಿ, ಭಾರತವನ್ನನು ಕಟ್ಟಿದರು ಎಂಬ ಬಗ್ಗೆ ವಿವರಿಸಿದ್ದಾರೆ.

ಅಲ್ಲದೇ, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು ಅಷ್ಟೆ. ಇವರ್ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

KPCC ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ.

ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಂತ್ರಜ್ಞಾನ, ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಿದ್ದು, ಕೃಷಿ ಅಭಿವೃದ್ಧಿ ನೆಹರೂ ಅವರ ದೂರದೃಷ್ಟಿಯ ಸಾಧನೆಗಳಾಗಿವೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಇಲ್ಲಿ ಏನೇನೂ ಇರಲಿಲ್ಲ. ಶಿಕ್ಷಣ ಸಂಸ್ಥೆಗಳು ಇರಲಿಲ್ಲ, ನೀರಾವರಿ ವ್ಯವಸ್ಥೆ ಇರಲಿಲ್ಲ. ಆದರೆ ದೇಶದ ಮೊದಲ ಪ್ರಧಾನಿಯಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ, ಪ್ರಜಾಪ್ರಭುತ್ವವಾದಿ ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂರವರು.

ಶಿಕ್ಷಣ ಸಂಸ್ಥೆಗಳು, ವಿಜ್ಞಾನ, ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಅಧ್ಯಯನ ಸಂಸ್ಥೆಗಳು, ಅಣೆಕಟ್ಟುಗಳು, ಆಸ್ಪತ್ರೆಗಳು ಸೇರಿ ಆಧುನಿಕ ಭಾರತದ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ಕ್ಷೇತ್ರಗಳನ್ನೂ ವಿಶ್ವಮಟ್ಟದ ಗುಣಮಟ್ಟದಲ್ಲಿ ಆಗಿನ ಕಾಲಕ್ಕೇ ಸ್ಥಾಪಿಸಿದ್ದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು ಅಷ್ಟೆ. ಇವರ್ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ. ಒಬ್ಬೇ ಒಬ್ಬ ಬಿಜೆಪಿ ಪರಿವಾರದ ಸದಸ್ಯ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲು ಸೇರಿಲ್ಲ.

ಬಿಜೆಪಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವ ಕೀಳರಿಮೆ ಮತ್ತು ಅಳುಕಿನಿಂದ ಸ್ವಾತಂತ್ರ್ಯ ಹೋರಾಟಗಾರರಾಗಿ 9 ವರ್ಷ ಜೈಲು ವಾಸ ಅನುಭವಿಸಿ 17 ವರ್ಷ ದೇಶದ ಪ್ರಧಾನಿ ಆಗಿದ್ದ ನೆಹರೂ ಅವರನ್ನು ಆಡಿಕೊಳ್ಳುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ನೆಹರೂ ಅವರಿಗೆ ಅಪಾರ ನಂಬಿಕೆ ಇತ್ತು‌. 17 ವರ್ಷಗಳ ಕಾಲ ಪ್ರಧಾನಿ ಆಗಿದ್ದ ನೆಹರೂ ಅವರು ಚರ್ಚೆ, ಸಂವಾದದಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶ್ರಮಿಸುವವರ ಕಟುಟೀಕೆಗಳನ್ನೂ ಅತ್ಯಂತ ಸಹನೆಯಿಂದ ಸ್ವೀಕರಿಸುತ್ತಿದ್ದರು. ಅಷ್ಟು ದೊಡ್ಡ ವ್ಯಕ್ತಿತ್ವ ನೆಹರೂ ಅವರದ್ದಾಗಿತ್ತು. ವಿಶ್ವ ಮಟ್ಟದಲ್ಲಿ ಭಾರತ ತಲೆ ಎತ್ತಿ ನಿಲ್ಲಲು ನೆಹರೂ ಅವರು ಭಾರತ ದೇಶಕ್ಕೆ ಹಾಕಿದ ಭದ್ರ ಬುನಾದಿ ಕಾರಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಲೋಕಸಭೆಗೆ ನಾನೂ ಆಕಾಂಕ್ಷಿ: ಬಸವರಾಜ ಗುರಿಕಾರ

1000ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಹಮಾಸ್ ಕಮಾಂಡರ್‌ ಹತ್ಯೆ..

3 ಲಕ್ಷ ರೂ. ಟೀ ಕಪ್‌ನೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ ನೀತಾ ಅಂಬಾನಿ

- Advertisement -

Latest Posts

Don't Miss