ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಪೋಟೋ, ವೀಡಿಯೋ ಮಾಡುವಂತಿಲ್ಲ ಎಂಬುದಾಗಿ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಪೋಟೋ, ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುಡುತ್ತಿದ್ದಾರೆ ಎಂಬುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಪತ್ರದಲ್ಲಿ ತಿಳಿಸಿದ್ದಾರೆ.
ಅಲ್ಲದೇ ಸರ್ಕಾರಿ ಕಚೇರಿಯ ಪೋಟೋ, ವೀಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ, ಇಲಾಖೆ, ಸರ್ಕಾರದ ಘನಟೆಗೆ ಕುಂದುಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಪೋಟೋ, ವೀಡಿಯೋ ಮಾಡದಂತೆ ನಿಷೇಧ, ನಿರ್ಬಂಧಿಸೋದಕ್ಕೆ ಮನವಿ ಮಾಡಿರುತ್ತಾರೆ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೇ ಸಾರ್ವಜನಿಕರು ಅನಧಿಕೃತವಾಗಿ ಪೋಟೋ ವೀಡಿಯೋ ಮಾಡದಂತೆ ನಿಷೇಧಿಸಿ ಆದೇಶಿದ್ದಾರೆ.




