Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡಲು ಬರಲ್ಲ. ರಾಜ್ಯದಲ್ಲಿ ಚಿತ್ರದುರ್ಗ ಮುರುಘ ಮಠದ ಸ್ವಾಮಿಗಳ ಪ್ರಕರಣವನ್ನು ನೋಡಿದ್ದೀರಿ. ಪೋಕ್ಸೋ ಕಾಯ್ದೆಯಡಿ ತನ್ನದೇ ಆದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಹೈಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಕೋರ್ಟ್ ನ ನಿರ್ದೇಶನ ಇರಬೇಕಾದರೆ ಕಾಂಗ್ರೆಸ್ ಬಿಜೆಪಿಯ ಪ್ರಶ್ನೆ ಬರಲ್ಲ. ಯಡಿಯೂರಪ್ಪ ತಪ್ಪಿತಸ್ಥರೆಂದು ಹೌದೋ ಅಲ್ಲವೋ ಅನ್ನೋದನ್ನು ನ್ಯಾಯಾಲಯ ನಿರ್ಧರಿಸುತ್ತೆ . ಸಂತ್ರಸ್ತೆಯೇ ನ್ಯಾಯಾಧೀಶರ ಎದುರು ಹೇಳಿಕೆ ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಮೂರು ಡಿಸಿಎಂ ಹುದ್ದೆ ಸೃಷ್ಟಿ ವಿಚಾರದ ಬಗ್ಗೆ ಮಾತನಾಡಿರುವ ಎಂ.ಬಿ.ಪಾಟೀಲ್, ಪಕ್ಷದ ಆಂತರಿಕ ವಲಯದಲ್ಲಿ ಚರ್ಚಿಸುತ್ತೇವೆ. ಬಹಿರಂಗವಾಗಿ ಈ ಕುರಿತು ಚರ್ಚಿಸೋಕೆ ಆಗಲ್ಲ. ಈಗಾಗಲೇ ಪಕ್ಷದ ಆಂತರಿಕ ವೇದಿಕೆಯಲ್ಲಿ ನಮ್ಮ ವಿಚಾರ ತಿಳಿಸಿದ್ದೇವೆ. ಮುಂದೆಯೂ ಅಗತ್ಯವಿದ್ದಲ್ಲಿ ಅಭಿಪ್ರಾಯ ತಿಳಿಸುತ್ತೇವೆ ಎಂದು ಪಾಟೀಲ್ ಹೇಳಿದ್ದಾರೆ.
ದರ್ಶನ್ ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತೆ. ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಯಾದ ನಂತರ ರಾಯಭಾರಿಯಾಗಿ ಮುಂದುವರಿಸೋಕೆ ಆಗಲ್ಲ. ಲೋಕಸಭೆಯಲ್ಲಿ ಲೀಡ್ ತಂದುಕೊಡದ ಸಚಿವರ ತಲೆದಂಡ ಇನ್ನೊಂದು ಮಧ್ಯಮಗಳ ಸೃಷ್ಟಿ. ಎಲ್ಲರೂ ಗಂಭೀರವಾಗಿ ಚುನಾವಣೆ ಮಾಡಿ ಅಂತ ಸೂಚಿಸಲಾಗಿತ್ತು ಚುನಾವಣೆಯಲ್ಲಿ ಸೋಲಿನ ಕುರಿತು ಪಕ್ಷದ ವೇದಿಕೆಯಲ್ಲಿ ಆತ್ಮವಲೋಕನ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.
ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ಸರ್ಕಾರ ಪತನ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿರುವ ಪಾಟೀಲ್, ಮೊದಲು ಅವರು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳೋಕೆ ಹೇಳಿ. ನಮ್ಮ ಸರ್ಕಾರ ಪತನಗೊಳಿಸಬೇಕಾದರೆ 60 ಶಾಸಕರ ಅಗತ್ಯವಿದೆ. ಬಿಜೆಪಿಯ ಒಬ್ಬರು ಶಾಸಕರು ನಮ್ಮ ಜೊತೆಗಿದ್ದಾರೆ. ಜೆಡಿಎಸ್ ನ ಬಹಳಷ್ಟು ಶಾಸಕರು ನಮ್ಮ ಪಕ್ಷ ಸೇರ್ಪಡೆಗೆ ಸಿದ್ದರಾಗಿದ್ದಾರೆ. ನಮ್ಮಲ್ಲಿ 60 ಶಾಸಕರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಬೇಕಾಗುತ್ತದೆ. ಇದೇನು ಹುಡುಗಾಟವಾ..? ಎಂದು ಪಾಟೀಲ್ ಪ್ರಶ್ನಿಸಿದ್ದಾರೆ.
ಒಬ್ಬ ಶಾಸಕರೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಗ್ಯಾರೆಂಟಿಗಳ ಕುರಿತು ಚರ್ಚೆ ಮಾಡುತ್ತೇವೆ. ಗ್ಯಾರೆಂಟಿಗಳನ್ನು ರದ್ದು ಮಾಡುವ ಪ್ರಸ್ತಾವನೆ ನಮ್ಮ ಬಳಿ ಸದ್ಯಕ್ಕಿಲ್ಲ. ಸಿಎಂ ಯಾರು ಆಗಬೇಕು ಅನ್ನೋದನ್ನ ಪಕ್ಷ ತೀರ್ಮಾನಿಸುತ್ತೆ. ಸಿಎಂ ಆಗಲು ಶಾಸಕರ ಬೆಂಬಲ ಬೇಕು. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಸದ್ಯಕ್ಕೆ ಆ ಪ್ರಶ್ನೆ ಬರಲ್ಲ. ಆಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದು, ಸಿಎಂ ಖರ್ಚಿ ಖಾಲಿ ಇಲ್ಲ. ಎಚ್ ಡಿ ಕುಮಾರಸ್ವಾಮಿ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಕೆಲ ಬೇಡಿಕೆಗಳನ್ನು ಶೀಘ್ರವಾಗಿ ಸಲ್ಲಿಸಲಾಗುತ್ತದೆ. ರಾಜ್ಯಕ್ಕೆ ಮಹತ್ವದ ಖಾತೆಗಳು ಸಿಕ್ಕಿರುವುದರಿಂದ. ನಮ್ಮ ರಾಜ್ಯಕ್ಕೂ ಒಂದಷ್ಟು ನೇರವಾಗಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?