Wednesday, January 15, 2025

Latest Posts

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

- Advertisement -

Political News: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಈಗಾಗಲೇ ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

- Advertisement -

Latest Posts

Don't Miss