Hubballi News: ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ನಿಧಾನವಾಗಿ ಕೋವಿಡ್ (Covid) ಎಲ್ಲೆಡೆ ಹಬ್ಬುತ್ತಿದೆ. ಅದಕ್ಕೆ ಆರೋಗ್ಯಾಧಿಕಾರಿಗಳು ಜನ ಎಚ್ಚರದಿಂದ ಇರಲು ಸೂಚನೆ ನೀಡಿದ್ದಾರೆ. ಉತ್ತರ ಕರ್ನಾಟಕ ಆರೋಗ್ಯ ಸಂಜೀವಿನಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಎದುರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎರಡು ವಿಶೇಷ ವಾರ್ಡ್
ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಲಾಗಿದ್ದು, ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಎರಡು ವಿಶೇಷ ವಾರ್ಡ್ ಆರಂಭಿಸಲಾಗಿದೆ. 90 ಸಾಮಾನ್ಯ 10 ಐಸಿಯು ಸೇರಿದಂತೆ ಒಟ್ಟು 100 ಬೆಡ್ ಇರುವ ವಿಶೇಷ ವಾರ್ಡ್ ಮೀಸಲಿಡಲಾಗಿದೆ.
ಲಕ್ಷಣ ಇದ್ದವರಿಗೆ ಕೋವಿಡ್ ಟೆಸ್ಟ್
ತುರ್ತು ಚಿಕಿತ್ಸೆಗಾಗಿ 40 KLLLMO ಆಕ್ಸಿಜನ್ ಟ್ಯಾಂಕ್ ಲಭ್ಯ ಇವೆ. ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತೆ. ಲಕ್ಷಣಗಳು ಕಂಡುಬಂದವರಿಗೆ ಕೋವಿಡ್ ಟೆಸ್ಟ್ ಸಹ ಮಾಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ಎಸ್. ಎಫ್. ಕಮ್ಮಾರ ಮಾಹಿತಿ ನೀಡಿದ್ದಾರೆ.
ಕೋವಿಡ್ ಎರಡು ಅಲೆಗಳ ಸಂದರ್ಭದಲ್ಲಿಯೂ ಸಾವಿರ ಬೆಡ್ಗಳ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿಯೂ ಅಗತ್ಯಕ್ಕೆ ತಕ್ಕಂತೆ ಬೆಡ್ ಗಳ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕಿಮ್ಸ್ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಧನಕರ್ಗೆ ಕರೆ ಮಾಡಿ ನಾನೂ 20 ವರ್ಷಗಳಿಂದ ಅವಮಾನ ಅನುಭವಿಸಿದ್ದೇನೆ, ಬೇಸರಿಸಬೇಡಿ ಎಂದ ಮೋದಿ
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ




