ಬಾಗಲಕೋಟೆ: 2021-22ನೇಯ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಪದವಿ, ಡಿಪ್ಲೋಮಾ, ವೃತ್ತಿಪರ, ಸ್ನಾತಕೋತ್ತರ, ಸಂಜೆ ಕಾಲೇಜು, ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು 2 ತಿಂಗಳವರೆಗೆ ವಿಸ್ತರಿಸಲಾಗಿದೆ.
ಬಸ್ ಪಾಸ್ ಹಾಗೂ 02 ತಿಂಗಳ ಅವಧಿ ವಿಸ್ತರಿಸಿಕೊಂಡ ರಶೀದಿ ಮತ್ತು ಕಾಲೇಜು ಪರೀಕ್ಷಾ ವೇಳಾಪಟ್ಟಿ ಅಂತಿಮ ಸೆಮಿಸ್ಟರ್, ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ ಎಲ್ಲ ವರ್ಗದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ, 2022-23ನೇ ಸಾಲಿನ ಹೊಸ ಪಾಸುಗಳನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




