Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಮಾಹಿತಿ ಇಂತಿದೆ..
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 03.07.2026 ಹಾಗೂ ಅರ್ಜಿ ಶುಲ್ಕ ಪಾವತಿಸಲು ದಿನಾಂಕ 04.07.2026 ನ್ನು ಕೊನೆಯ ದಿನಾಂಕವನ್ನಾಗಿ ನಿಗದಿಗೊಳಿಸಲಾಗಿತ್ತು.
ಆದರೆ ಕೆಲವು ಅಭ್ಯರ್ಥಿಗಳ ಪ್ರಾಧಿಕಾರಕ್ಕೆ ಸಲ್ಲಿಸಲಾದ ಮನವಿಗಳಲ್ಲಿ, ತಾಂತ್ರಿಕ ಸಮಸ್ಯೆಗಳು, ಪ್ರಮಾಣ ಪತ್ರಗಳನ್ನು ಪಡೆಯಲು ವಿಳಂಬ ಹಾಗೂ ಅನೇಕ ಕಾರಣಗಳಿಂದ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಹಾಗೂ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ತಪ್ಪಾದ ಮಾಹಿತಿಗಳನ್ನು ನಮೂದಿಸಿದ ಹಿನ್ನಲೆಯಲ್ಲಿ ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡುವಂತೆ ಕೋರಿರುತ್ತಾರೆ.
ಅಭ್ಯರ್ಥಿಗಳ ಮನವಿಗಳನ್ನು ಪರಿಗಣಿಸಿ, ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ತಿದ್ದುಪಡಿ ಕುರಿತು ವೇಳಾಪಟ್ಟಿಯನ್ನು ವಿಸ್ತರಿಸಲು ಅನುಮೋದಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಆನ್‌ಲೈನ್ ಅರ್ಜಿ ಸಲ್ಲಿಕೆ ಹಾಗೂ ಶುಲ್ಕಪಾವತಿಯ ಕೊನೆಯ ದಿನಾಂಕ : 08.07.2026 ಸಂಜೆ-4,00 ಘಂಟೆಗೆ. ಹಾಗೂ ಅರ್ಜಿ ತಿದ್ದುಪಡಿ ಮಾಡಲು 12.07.2026 ದಿನಾಂಕದವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಸ್ತುತ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 3, 2026




