Wednesday, September 24, 2025

Latest Posts

ಕಾದಂಬರಿಗಾರ ಎಸ್‌ ಎಲ್‌ ಭೈರಪ್ಪ ಕಂಡ ಮೋದಿ!

- Advertisement -

ಕಾದಂಬರಿಗಳ ಮಾಂತ್ರಿಕ ಎಸ್‌ ಎಲ್‌ ಬೈರಪ್ಪ ಇಂದು ನಿಧನರಾಗಿದ್ದಾರೆ. ಬೈರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚುಮೆಚ್ಚು. 2024 ಹಾಗೂ 2029ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಹೆಚ್ಚೆಚ್ಚು ಬಹುಮತದಿಂದ ಗೆಲ್ಲಬೇಕು. ನಂತರ ನಿವೃತ್ತಿಗೊಳ್ಳಬೇಕು. ಅಲ್ಲಿಯವರೆಗೆ, ಅವರಂತೆಯೇ ಇರುವವರನ್ನು ತಯಾರು ಮಾಡಬೇಕು ಸಲಹೆ ನೀಡಿದ್ದರು.

ಮೋದಿ ಕಾರಣದಿಂದಲೇ ನನಗೆ ಈ ಪುರಸ್ಕಾರ ದೊರೆತಿದೆ, ಇಲ್ಲದಿದ್ದರೆ ಬರುತ್ತಿರಲಿಲ್ಲ. ಇದರಿಂದ ಖುಷಿಯಾಗಿದೆ. ಪ್ರಶಸ್ತಿ ಕೊಟ್ಟರೆಂಬ ಕಾರಣಕ್ಕೆ ಅವರ ಸರ್ಕಾರವನ್ನು ಹೊಗಳುವುದಿಲ್ಲ. ದೇಶದಲ್ಲಿ ಮೋದಿ ಸರ್ಕಾರದಂತಹ ಸರ್ಕಾರ ಇದುವರೆಗೆ ಬಂದಿರಲಿಲ್ಲ. ಸೇವೆಯನ್ನೇ ದೃಷ್ಟಿಯಲ್ಲಿಟ್ಟುಕೊಂಡವರು, ಧೈರ್ಯ ಇರುವಂಥವರು ಇದುವರೆಗೆ ಯಾರೂ ಬಂದಿರಲಿಲ್ಲ ಎಂದಿದ್ದರು. ಪದ್ಮಭೂಷಣ ಪುರಸ್ಕಾರ ಸಿಕ್ಕಿದ್ದಕ್ಕಿಂತಲೂ, ನನ್ನ ಪುಸ್ತಕಗಳನ್ನು ಲಕ್ಷಾಂತರ ಮಂದಿ ಓದಿ ಸಂತೋಷಪಟ್ಟಿರುವುದು ಹೆಚ್ಚಿನ ಖುಷಿ ಕೊಡುತ್ತದೆ. ನನಗೀಗ 92 ವರ್ಷ ವಯಸ್ಸು. ನಾನು ಸತ್ತ ಮೇಲೂ ನನ್ನ ಪುಸ್ತಕಗಳು ಬದುಕುತ್ತವೆಯೇ, ಪ್ರಸ್ತುತವಾಗಿರುತ್ತವೆಯೇ? ಪ್ರಸ್ತುತವಾದರೆ ಅದೇ ನಿಜವಾದ ಪ್ರಶಸ್ತಿ ಎಂದು ಆಗ ಕಾದಂಬರಿಕಾರ ಬೈರಪ್ಪ ಹೇಳಿದ್ದರು.

ಈಗ ದೇಶ ಬಹಳ ಪ್ರಗತಿ ಸಾಧಿಸಿದೆ. ಅಂತೆಯೇ ಸವಾಲುಗಳೂ ಇವೆ. ವಿದೇಶದಲ್ಲಿ ಸೋತವರು ಗೆದ್ದವರನ್ನು ಅಭಿನಂದಿಸುತ್ತಾರೆ. ಆದರೆ, ನಮ್ಮಲ್ಲಿ ಆ ರೀತಿ ಇಲ್ಲ. ವಿರೋಧ ಪಕ್ಷದಲ್ಲಿರುವವರು ಜವಾಬ್ದಾರಿ ತಿಳಿಯದೇ ಸದಾ ಬೈಗುಳದಲ್ಲಿ ತೊಡಗುತ್ತಿದ್ದಾರೆ ಎಂದು ವಿಷಾದಿಸಿದರು. ಇನ್ನು ಎಸ್‌ ಎಲ್‌ ಬೈರಪ್ಪನವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿಯವರು ಬೈರಪ್ಪನವರ ಜೊತೆಗಿನ ಫೋಟೋವನ್ನು ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ. ಅಂತೆಯೇ ಹೆಚ್‌ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಮತ್ತಿತ್ತರ ಗಣ್ಯರು ಮತ್ತು ಚಲನಚಿತ್ರದ ನಟನಟಿಯರು ಸಂತಾಪ ಸೂಚಿಸಿದ್ದಾರೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss