Wednesday, July 2, 2025

Latest Posts

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

- Advertisement -

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ. ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ʼನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ ಎಂದಿರುವ ಎಚ್‌ಡಿಕೆ, ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿ ಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ. ಕೋಲಾರ ಜಿಲ್ಲೆ ಒಂದರಲ್ಲೇ ಅತಿ ಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ʼಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss