ಈಗಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸದಿರುವುದು ಸೂಕ್ತ- ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

www.karnatakatv.net: ರಾಜ್ಯ- ಮೈಸೂರು- ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್ ಎಸ್ ಎಲ್ ಸಿ ಪರೀಕ್ಷೆ ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಸರ್ಕಾರದಲ್ಲಿ ಸಚಿವರ ನಡುವೆ ಸಮನ್ವಯದ ಕೊರತೆ ಇದ್ದು, ಸಚಿವ ಸಂಪುಟ ಸಭೆ ನಡೆಸದೆಯೇ ಈ ನಿರ್ಧಾರ ಕೈಗೊಂಡಿದ್ದಾರೆ. ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಸಚಿವರಿಗೇ ಮಾಹಿತಿ ಇಲ್ಲ, ಆದ್ರೂ ಯಾಕೆ ಈ ಪರೀಕ್ಷೆ ನಡೆಸುತ್ತಿದ್ದಾರೋ ಗೊತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ರು.

About The Author