ಮೈಸೂರು ದಸರಾಕ್ಕೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ಅಧಿಕೃತ ಆಹ್ವಾನ

Koppala News: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸಂಸದರಾದ ರಾಜಶೇಖರ್ ಹಿಟ್ನಾಳ್ ಸೇರಿದಂತೆ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ ಫಲಪುಷ್ಪ ನೀಡಿ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಶ್ರೀಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದರು.

ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳು ದಸರಾ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ ಈ ಸುದ್ದಿ ಸುಳ್ಳು ಮತ್ತು ಆಧಾರರಹಿತ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದು ಇದೀಗ ಸರ್ಕಾರದ ವತಿಯಿಂದ ಗವಿಮಠಕ್ಕೆ ಆಗಮಿಸಿ ಶ್ರೀಗಳಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About The Author