ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸೆಪ್ಟೆಂಬರ್ ಉದ್ಘಾಟನೆ ಮಾಡಲಾಗುತ್ತದೆ. ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹಿಂದೂ ಪರ ಸಂಘಟನೆಗಳ ವಿರೋಧವಿದ್ದರೂ ಸಹ, ಯಾವುದಕ್ಕೂ ಜಗ್ಗದ ರಾಜ್ಯ ಸರ್ಕಾರ, ಸೆಪ್ಟೆಂಬರ್ 3ರಂದು ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲು ಮುಂದಾಗಿದೆ.
ಸಂಜೆ ನಾಲ್ಕು ಗಂಟೆಗೆ ಹಾಸನದಲ್ಲಿರುವ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿ ನೀಡಿ, ಆಹ್ವಾನ ನೀಡಲಾಗುತ್ತದೆ. ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತ ದಸರಾಗೆ ಅಧಿಕೃತ ಆಹ್ವಾನನೀಡಲಿದೆ. ಬಾನು ಮುಷ್ತಾಕ್ ಆಯ್ಕೆ ತೀವ್ರ ವಿವಾದ ಪ್ರತಿಭಟನೆಗಳು ನಡೆದಿದ್ದವು ಆದರೆ, ಇದ್ಯಾವುದಕ್ಕೂ ಹಿಂದೆ ಸರಿಯದ ಸಿದ್ದರಾಮಯ್ಯ ಸರ್ಕಾರ ತಮ್ಮ ನಿರ್ಧಾರದಿಂದ ಹಿಂದೆ ಸರಿಯದೆ ಅಧಿಕೃತ ಆಹ್ವಾನಕ್ಕೆ ಸಿದ್ಧತೆ ನಡೆಸಿಕೊಂಡಿದೆ.
2025 ನೇ ಸಾಲಿನ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರವು ತೀರ್ಮಾನಿಸಿದೆ. ಈ ಹಿನ್ನೆಲೆ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಯನ್ನು ಕರ್ನಾಟಕದ ಪ್ರತಿಷ್ಠಿತ ಸಾಹಿತಿಗಳು ಹಾಗೂ ಪ್ರತಿಷ್ಠಿತ ಅಂತರ ರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಭಾನು ಮುಷ್ಟಾಕ್ ರವರಿಂದ ನೆರವೇರಿಸಲು ಸರ್ಕಾರ ನಿರ್ಧರಿಸಿದೆ.
ಈ ಹಿನ್ನೆಲೆ ಭಾನು ಮುಷ್ಟಾಕ್ ರವರನ್ನು ಸರ್ಕಾರ ಪರವಾಗಿ, ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಹಾಸನ ನಗರದಲ್ಲಿರುವ ಗೌರವಾನಿತರ ಸ್ವಗೃಹಕ್ಕೆ ತೆರಳಿ ಆಹ್ವಾನಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಟಣೆಯಲ್ಲಿ ಬರೆದುಕೊಂಡಿದೆ. ಆ ಮೂಲಕ ಸರ್ಕಾರ ಯಾವುದೇ ವಿರೋಧಕ್ಕೂ ಮಣಿದಿಲ್ಲ ಎಂಬುದು ತಿಳಿದುಬಂದಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ

