ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ.

ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್ ಬಿಲ್ ಪಾಸ್‌ ಮಾಡಲು ಇವರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬಾಲಕೃಷ್ಣ ಅವರು ಹಾವೇರಿಯ ಮೂರು ಕಡೆಗಳಲ್ಲಿ ರಸ್ತೆ ಕಾಮಗಾರಿ ಮಾಡಿದ್ದರು. ಕಾಮಗಾರಿ ಬಿಲ್ ಪಾಸ್ ಮಾಡಲು ಮನವಿ ಮಾಡಿದಾಗ, ಧಾರವಾಡದ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಮೊದಲು ಪೋನ್ ಪೇ ಮೂಲಕ 83ಸಾವಿರ ಪಡೆದು ನಂತರ ತಲಾ 50ಸಾವಿರಕ್ಕೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಒಂದು ಲಕ್ಷ ಹಣ ಪಡೆಯುವ ವೇಳೆ, ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ.

‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

About The Author