www.karnatakatv.net: ದಸರಾ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.
ಹಬ್ಬದ ದಿನ ಎಲ್ಲರಿಗೂ ಶಾಕ್ ನೀಡಿದ ತೈಲ ಕಂಪನಿಗಳು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ, ಕಳೆದ ಏರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು ಆದರೆ ಈಗ ಮತ್ತೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ. ಗರಿಷ್ಠಮಟ್ಟವನ್ನು ದಾಟಿ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ಇಂದು ಲೀಟರ್ ಪೆಟ್ರೋಲ್ ದರದಲ್ಲಿ 31ರಿಂದ 35 ಪೈಸೆ ಏರಿಕೆ ಮಾಡಲಾಗಿದೆ. ಹಾಗೇ ಒಂದು ಲೀಟರ್ ಡೀಸೆಲ್ ದರ 34 ರಿಂದ 37 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿದೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.52 ರೂಪಾಯಿ ಇದೆ. ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.75 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.40 ರೂಪಾಯಿಗೆ ಏರಿಕೆ ಆಗಿದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.




