Saturday, October 19, 2024

Latest Posts

ತೈಲ ದರ ಮತ್ತೆ ಏರಿಕೆ..!

- Advertisement -

www.karnatakatv.net : ಇಂದು ಮತ್ತೆ ತೈಲ ದರ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುವದರಿಂದ ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ.

ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿರುವದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ. ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತ ಎರಡು ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಈ ಹಬ್ಬದ ಋತುವಿನಲ್ಲಿ ಇಂಧನ ದರ ಏರುಗತಿಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.67 ರೂಪಾಯಿ ನಿಗದಿಯಾಗಿದೆ. ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.80 ರೂಪಾಯಿ, ಲೀಟರ್ ಡೀಸೆಲ್ ದರ 104.75 ರೂಪಾಯಿ ಇದೆ. ಅದೇ ರೀತಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.46 ರೂಪಾಯಿ, ಲೀಟರ್ ಡೀಸೆಲ್ ದರ 99.78 ರೂಪಾಯಿಗೆ ಏರಿಕೆಯಾಗಿದೆ.
ಹಾಗೂ ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.83 ರೂಪಾಯಿಗೆ ಏರಿಕೆಯಾಗಿದೆ. ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

- Advertisement -

Latest Posts

Don't Miss