www.karnatakatv.net :ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಸರಾಸರಿ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ.
ಕೊರೊನಾ ಮಹಾಮಾರಿಯಿಂದ ಬೆಸತ್ತ ಜನರು ಈಗ ತೈಲದಿಂದಲು ತುಂಬಾ ಕುಂಟಿತರಾಗಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ.
ಸೆ.5 ರಂದು ತೈಲಗಳ ಬೆಲೆಯನ್ನು 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಅದಾದ ನಂತರ ಇಂಧನ ಬೆಲೆ ಏರಿಕೆಯಾಗುತ್ತಿದೆ. ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೇಟ್ರೊಲ್ ಮೇಲಿನ ತೆರಿಗೆ ಯನ್ನು ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲೆ ಬೆಲೆ ಮಾತ್ರ ಏರಿಕೆಯಾಗಿದೆ.
ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ಕಳೆದ 7 ದಿನಗಳಿಂದ ಚೇತರಿಸಿಕೊಂಡಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಗೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ 100 ರು ಬೆಲೆ ಇದ್ದೇ ಇದೆ.
ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 42 ಬಾರಿ ಹಾಗೂ ಡೀಸೆಲ್ 39 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.
ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ. ದೆಹಲಿಯಲ್ಲಿ ಶುಕ್ರವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.89ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 90.17ರು ಆಗಿದೆ.