Saturday, May 25, 2024

Latest Posts

Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

- Advertisement -

Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ.

ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಟ್ರಸ್ಟಿ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಚಾನ್ಸಲರ್ (ಆಡಳಿತ) ವಿಶಾಲ್ ಹೆಗ್ಡೆ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಎ.ಯೋಗೀಶ್ ಹೆಗ್ಡೆ ಅವರು ಗೌರವ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮ, ಕ್ಯಾಂಪಸ್ ಭೇಟಿ, ಅಧ್ಯಾಪಕ-ಹಳೆಯ ವಿದ್ಯಾರ್ಥಿಗಳ ಸಂವಾದ, , ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೋಜಿನ ಆಟಗಳನ್ನೊಳಗೊಂಡು ರೂಪಿಸಲಾಗಿದೆ. ಭಾರತದ ವಿವಿಧ ಭಾಗಗಳಿಂದ 400 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಕ್ಯಾಂಪಸ್‍ಗೆ ಭೇಟಿ ನೀಡಲಿದ್ದಾರೆ.

ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಲ್ಯೂಮ್ನೈ ರಿಲೇಶನ್ಸ್ ವಿಭಾಗದ ನಿರ್ದೇಶಕ ಪೆÇ್ರ.ಪ್ರಸನ್ನ ಕೈಲಾಜೆ ಮತ್ತು ನಿಟ್ಟೆಯ ಎನ್.ಆರ್.ಎ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪೆÇ್ರ. ಪ್ರಶಾಂತ್ ಕುಮಾರ್ ಹೊಳ್ಳ ಮಾರ್ಗದರ್ಶನದಲ್ಲಿ ಎನ್.ಆರ್.ಎ.ಎಂ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಈ ಕಾರ್ಯಕ್ರಮವನ್ನು ಸಂಯೋಜಿಸಲಿದ್ದಾರೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Murugesh : ಸೇವಾ ನಿವೃತ್ತಿ ಹೊಂದಿದ ಪ್ರೋ. ಮುರುಗೇಶಿ .ಟಿ ಯವರಿಗೆ ಸನ್ಮಾನ

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

Varun Kamath : ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ

- Advertisement -

Latest Posts

Don't Miss