Sunday, December 22, 2024

Latest Posts

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

- Advertisement -

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವಾಮನ” ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಸಹ ಇದೆ.

EQUINOX GLOBAL ENTERTAINMENT ಲಾಂಛನದಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ ಮೊದಲ ಚಿತ್ರವಿದು.

ಶಂಕರ್ ರಾಮನ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಭೂಷಣ್ ನೃತ್ಯ ನಿರ್ದೇಶನ, ಅರ್ಜುನ್ ರಾಜ್, ವಿಕ್ರಂ ಮೋರ್ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ನವೀನ್ ಹಾಡೋನಳ್ಳಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಧನ್ವೀರ್ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ತಾರಾ, ಸಂಪತ್ ರಾಜ್, ಆದಿತ್ಯ ಮೆನನ್, ಅವಿನಾಶ್, ಅಚ್ಯುತಕುಮಾರ್, ಕಾಕ್ರೋಜ್ ಸುಧಿ, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕೆ.ಜಿ.ಸಚ್ಚು, ಅರುಣ್ ಶ್ರೀರಾಮಯ್ಯ ಮುಂತಾದವರು “ವಾಮನ” ಚಿತ್ರದ ತಾರಾಬಳಗದಲ್ಲಿದ್ದಾರೆ.

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗಾ’..

Dharshan : ಡಿಬಾಸ್ ದಂಪತಿ ಮಸ್ತ್ ಡ್ಯಾನ್ಸ್ ವೀಡಿಯೋ ವೈರಲ್…!

Sunny Leone : ಭಾರತದಲ್ಲಿ ಕಳೆದು ಕೊಂಡರಂತೆ ಸನ್ನಿಲಿಯೋನ್ ಮೂರು ಕಾರು..?!

- Advertisement -

Latest Posts

Don't Miss