- Advertisement -
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದ್ದಾರೆ.
ಇನ್ನ“ಂದೆಡೆ ಕುಣಿಗಲ್ ಶಾಸಕ ಡಾ.ಎಚ್.ಡಿ ರಂಗನಾಥ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಲಿ ಎಂದು ಹೋಮ ಮಾಡಿಸಿದ್ದಾರೆ. ಕುಣಿಗಲ್ ತಾಲೂಕಿನ ಎಡೆಯೂರಿನಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಲ್ಲದೇ, ಎಡೆಯೂರಿನಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವಾಲಯದ ಬಳಿ ಮೃತ್ಯುಂಜಯ ಹೋಮ ಮತ್ತು ಸಿದ್ದಲಿಂಗೇಶ್ವನಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ.
- Advertisement -

