Saturday, November 8, 2025

Latest Posts

ಏನಿದು ₹45,000 ಕೋಟಿ ಕಟಾ ಕಟ್?

- Advertisement -

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ, ಕಾಂಗ್ರೆಸ್ ಮಹಾ ದೋಖಾ ಮಾಡ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ. ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಹೀಗಂತ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ. 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ. ಆದ್ರೆ ಇದರ ಬಗ್ಗೆ ಚಿಂತಿಸಬೇಡಿ, ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ.

ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ. ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಪೋಸ್ಟ್‌ ಮಾಡಿದ್ದಾರೆ.

ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ, 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ. ಆದರೆ ಚಿಂತಿಸಬೇಡಿ, ಜೆಡಿಎಸ್ ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ.

ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -

Latest Posts

Don't Miss