Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.
ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ. ಇನ್ನುಳಿದ ಐದು ಜನರಿಗೆ ಗಾಯಗಳಾಗಿದ್ದು, ಐದು ಜನರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಗಾಯಾಳುಗಳನ್ನು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕಾರವಾರದಿಂದ ಮದುವೆ ಮುಗಿಸಿ ವಾಪಸ್ ಧಾರವಾಡದತ್ತ ಬರುತ್ತಿದ್ದ ಸಂದರ್ಭದಲ್ಲಿ ಕಾರು ಹಿರೇಹೊನ್ನಳ್ಳಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಧಾರವಾಡದ ಅರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ.