State News: ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿ15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದು ಬೆಳಕಿಗೆ ಬಂದಿದೆ. ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದು ಇದನ್ನುಗಮನಿಸಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಪ್ರಶ್ನಿಸಿದಾಗ ನಾನು ಮೊಳಕಾಲ್ಮೂರು ಶಾಸಕ ಎಂದು ಆತ ಹೇಳಿದ್ದಾನೆ. ಅಲ್ಲದೇ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ತೆರಳಿ ಶೇಕ್ ಹ್ಯಾಂಡ್ ಕೂಡ ಮಾಡಿದ್ದಾನೆ ಎನ್ನಲಾಗಿದೆ.
ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಮಾರ್ಷಲ್ಗಳ ಗಮನಕ್ಕೆ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದ ಎಂಬ ಪ್ರಶ್ನೆಗಳುಮೂಡಿವೆ. ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ ಯಾನೇ ತಿಪ್ಪೇರುದ್ರ ಎಂದು ಗುರುತಿಸಲಾಗಿದೆ. ಪೊಲೀಸರು ವಶಕ್ಕೆ ಪಡೆದಿದ್ದು ಈತನ ಮೊಳಕಾಲ್ಮೂರು ತಿಪ್ಪೇರುದ್ರ ಎಂದು ತಿಳಿದುಬಂದಿದೆ.