Friday, November 22, 2024

Latest Posts

Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್

- Advertisement -

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರಿಗೆ ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರದ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ ಮುಂದೂಡುವ ದುರುದ್ದೇಶವಿದೆ ಎಂದರು.

ಮೋದಿ ಅವರು ಚುನಾವಣೆ ಮುಂದೂಡುವುದು, ಸಂವಿಧಾನ ಬದಲಿಸಿ ಲೋಕಸಭಾ ಚುನಾವಣೆ ಮುಂದೂಡಿದರೆ ಜನರು ಸುಮ್ಮನಿರಲ್ಲ. ಸಮಿತಿಯಲ್ಲಿ ಸುಪ್ರೀಂ ಕೋಟ್೯ ನ್ಯಾಯಾಧೀಶರು ನೇಮಕ ಮಾಡಬೇಕಿತ್ತು. ಪಕ್ಷಾತೀತವಿದ್ದ ಎಷ್ಟೊಂದು ಜನರಿದ್ದಾರೆ ಅಂತವರನ್ನು ನೇಮಕ ಮಾಡಿಕೊಳ್ಳಬೇಕಿತ್ತು. ಕೇಂದ್ರ ಸರ್ಕಾರ ಹೆಜ್ಜೆಯಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಹೇಳಿದರು.
ಕರ್ನಾಟಕ ಚುನಾವಣೆ ಬಳಿಕ ಬಿಜೆಪಿ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದಲ್ಲಿ ಅವರ ಪರಿಸ್ಥಿತಿ ಹದಗೆಡುತ್ತಿದೆ. ಐದು ಗ್ಯಾರಂಟಿ ಯಶಸ್ಸು ನೋಡಿ ಕೇಂದ್ರ ಸರ್ಕಾರ ಭಯದಿಂದ ಬೆಲೆ ಇಳಿಕೆ ಮಾಡುತ್ತಿದೆ ಎಂದರು.

ಕಾವೇರಿ ರಾಜಕೀಯ ಮಾಡುತ್ತಿದೆ ದೇವೆಗೌಡರ ಹೇಳಿಕೆ ಪ್ರತಿಕ್ರಿಯಿಸಿ, ಕರ್ನಾಟಕ ಹಿತ ರಕ್ಷಣೆಗೆ ಕಾನೂನು ಹೋರಾಟ ಮಾಡಿದ್ದೇವೆ. ಎಲ್ಲ ಪಕ್ಷ ಸಭೆ ಕರೆದು ಮಾರ್ಗದರ್ಶನ ಪಡೆದಿದ್ದೇವೆ. ಇದರಲ್ಲಿ ಯಾವುದೇ ರಾಜಕಾರಣ ಮಾಡಿಲ್ಲ ಎಂದರು.

ಸಂಕಷ್ಟ ಸೂತ್ರ ಮಾಡುವುದು ಸರ್ಕಾರದ ಉದ್ದೇಶವಿದೆ‌. ಬಿಜೆಪಿ ನಾಯಕರು ಕಾಂಗ್ರೆಸ್ಗೆ ಬರಲು ಅಭಿಪ್ರಾಯ ಪಡುತ್ತಿದ್ದಾರೆ. ಸಮಾಜದಲ್ಲಿ ಬಡವರ ಪರ ಮನಸ್ಥಿತಿ ಇರುವವರು ಪಕ್ಷಕ್ಕೆ ಬರುವವರು ಆಸಕ್ತರಾಗಿದ್ದಾರೆ. ಪಕ್ಷಕ್ಕೆ ಬಂದವರನ್ನು ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಹದಾಯಿ ಯೋಜನೆ ಅನುಷ್ಠಾನ ಬಿಜೆಪಿ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ ಅನುಮತಿ ಕೊಡಿಸಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಡ ತರುತ್ತದೆ. ಬಿಜೆಪಿ ನುಡಿದಂತೆ ನಡೆಯಬೇಕು. ರಾಜ್ಯದ ಜನರ ಹಿತಕ್ಕಾಗಿ ಅನುಮತಿ ಕೊಡಿಸಬೇಕು ಎಂದು ಹೇಳಿದರು.

Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು..!

 

Traffic Rules Break: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಪೊಲೀಸ್:

HD Devegowda :ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ದೇವೇಗೌಡ ಕುಟುಂಬ:

- Advertisement -

Latest Posts

Don't Miss