Saturday, April 20, 2024

Latest Posts

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

- Advertisement -

oneplus news:

ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ.

ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು ಎಸ್​ಬಿಐ ಕ್ರೆಡಿಟ್ ಕಾರ್ಡ್​ ಮೂಲಕ ಖರೀದಿಸಿದರೆ 1,500 ರೂ. ರಿಯಾಯಿತಿ ಸಿಗಲಿದೆ. ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್ 5G ಸ್ಮಾರ್ಟ್‌ಫೋನ್‌ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ.

ವಿಶೇಷವಾಗಿ ಇದರಲ್ಲಿ ಗೇಮಿಂಗ್​​ಗಾಗಿ 240Hz ರೀಫ್ರೆಶ್‌ ರೇಟ್ ನೀಡಲಾಗಿದೆ. ಇದಕ್ಕೆ ತಕ್ಕಂತೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಓಎಸ್​ನಿಂದ ಕಾರ್ಯನಿರ್ವಹಿಸುತ್ತದೆ.

ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಒಟ್ಟಾರೆ ಒನ್ ಪ್ಲಸ್ ಮೊಬೈಲ್ ಖರೀದಿಸಲು ತಯಾರಿಯಲ್ಲಿರುವವರಿಗೆ ಇದು ಉತ್ತಮ ಸಮಯವಾಗಿದೆ.

ಪೇಟಿಯಂ ಅಪ್ಡೇಟೆಡ್….ಬಂದಿದೆ ಪೇಟಿಯಂನಲ್ಲಿ ಹೊಸ ಆಯ್ಕೆ..

- Advertisement -

Latest Posts

Don't Miss