ನಾರೀಶಕ್ತಿ ಪ್ರಶಸ್ತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ದಿ: 08/03/2023 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನೀಡುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲಾಖೆಯ ವೆಬ್‍ಸೈಟ್ www.awards.gov.in ರಲ್ಲಿ ದಿ: 31/10/2022 ರೊಳಗಾಗಿ ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಲ್ಕೊಳ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ, ಶಿವಮೊಗ್ಗ, ದೂ.ಸಂ.: 08182-295514 ನ್ನು ಸಂಪರ್ಕಿಸುವುದು.

About The Author