Tuesday, October 14, 2025

Latest Posts

ಆನ್‌ಲೈನ್ ಸೇವೆಯ ಭಕ್ತರೇ ಎಚ್ಚರ : ದೇವರ ಹೆಸರಲ್ಲಿ ಮಹಾ ವಂಚನೆ!

- Advertisement -

ಆನ್‌ಲೈನ್ ಸೇವೆಗೆ ಮೊರೆ ಹೋಗುವ ಭಕ್ತರು ಹುಷಾರಾಗಿರಿ. ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ಹಣ ವಂಚಿಸಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿತ್ತು. ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ವಶಕ್ಕೆ ಪಡೆದಿದೆ.

ಆರೋಪಿಗಳು www.devaseva.com ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಆರಂಭಿಸಿದ್ದರು. ದೇಶದ ಹಾಗೂ ರಾಜ್ಯದ ಪ್ರಸಿದ್ಧ ದೇವಾಲಯಗಳ ಹೆಸರು ಬಳಸಿ ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ಭಕ್ತರಿಂದ ಹಣ ಪಡೆದು ವಂಚಿಸುತ್ತಿದ್ದರು. ಈ ಬಗ್ಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ, ದೇವಾಲಯದ ಉಪವ್ಯವಸ್ಥಾಪಕ ರಾಘವೇಂದ್ರ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅದರ ನಂತರ, ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ವಿಶೇಷ ತಂಡ ರಚಿಸಿ ಆರೋಪಿ ಇಬ್ಬರನ್ನು ಪತ್ತೆ ಹಚ್ಚಿದ್ದಾರೆ. ಪ್ರಸ್ತುತ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ವಂಚನೆಗೆ ಒಳಗಾದ ಭಕ್ತರು ಮುನ್ನೆಚ್ಚರಿಕೆ ವಹಿಸಲು ಪೊಲೀಸರು ಮನವಿ ಮಾಡಿದ್ದಾರೆ. ಗಮನಾರ್ಹವೆಂದರೆ, ಇದಕ್ಕೂ ಮುನ್ನ ರಾಜಸ್ಥಾನದಲ್ಲಿ ಇದೇ ರೀತಿ ಟಿಟಿಡಿ, ಶ್ರೀಶೈಲಂ, ತ್ರಯಂಬಕೇಶ್ವರ ದೇವಾಲಯಗಳು ಮತ್ತು ಎಪಿಟಿಡಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಂದ ₹50 ಲಕ್ಷ ವಂಚನೆ ನಡೆದಿತ್ತು ಎನ್ನಲಾಗಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss