ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ.
ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿ ಮಾಡಲು ಇಲಾಖೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಸಿವಿಲ್ ವಿಭಾಗದಲ್ಲಿ ಪುರುಷರಿಗೆ 138 ಹುದ್ದೆ ಮೀಸಲಿದ್ದರೆ, 41 ಹುದ್ದೆ ಮಹಿಳೆಯರಿಗೆ ಮೀಸಲಾತಿ ಇದೆ.
ಇನ್ನು ಸಶಸ್ತ್ರ ಮೀಸಲು ಪಡೆಗಳಾದ ಸಿಎಆರ್ ಮತ್ತು ಡಿಎಆರ್ ವಿಭಾಗಳಲ್ಲಿ 40 ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ನಿನ್ನೆಯಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆಗಸ್ಟ್ 5 ನೇ ತಾರಿಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆನ್ ಲೈನ್ ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 7ರವರೆಗೆ ಅವಕಾಶವಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾಮರ್ಥ್ಯ ಪರೀಕ್ಷೆ ಕೂಡ ನಡೆಸಲಾಗುತ್ತದೆ. ಅರ್ಜಿ ಶುಲ್ಕ, ಆನ್ ಲೈನ್ ಅರ್ಜಿ ಭರ್ತಿ ವಿಧಾನ ಹಾಗೂ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ http://psinhk19.ksp-online.in/ ಸಂಪರ್ಕಿಸಬಹುದಾಗಿದೆ.
ಚಂದ್ರಗ್ರಹಣ- ಈ ರಾಶಿಯವರಿಗೆ ಶುಕ್ರದೆಸೆ ಶುರು..!!ಮಿಸ್ ಮಾಡದೇ ಈ ವಿಡಿಯೋ ನೋಡಿ