www.karnatakatv.net : ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದರಿಂದ ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಕಳೆದ ವರ್ಷದ ಸ್ಮಾರ್ಟ್ ಪಾಸ್ ಅಥವಾ ಈ ವರ್ಷದ ಶೈಕ್ಷಣಿಕ ದಾಖಲಾತಿ ರಶೀತಿ ತೋರಿಸಿ ಪ್ರಯಾಣಿಸಬಹುದಾಗಿದೆ.
ಸರ್ಕಾರ ಮತ್ತು ಖಾಸಗಿ ಶಾಲೆಗೆ ಮಕ್ಕಳನ್ನು ಯಾವ ರೀತಿ ಕರೆತರಬೇಕು, ತರಗತಿಯಲ್ಲಿ ಯಾವ ರೀತಿ ಕೂರಿಸಬೇಕು, ಮಕ್ಕಳು ಶಾಲೆಯಲ್ಲಿ ಯಾವ ರೀತಿ ಇರಬೇಕು, ಶಿಕ್ಷಕರು ಯಾವ ರೀತಿ ಮುಂಜಾಗ್ರತಾ ಕೊರೋನಾ ನಿಯಮಗಳನ್ನು ಪಾಲಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಪಾಲಕರ ಅನುಮತಿ ಪಡೆದೇ ಶಾಲೆಗೆ ಬರಬೇಕು ಎಂದು ಹೇಳಿದ್ದಾರೆ.
ಸೋಮವಾರದಿಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರ ಜೊತೆ ಬೆಂಗಳೂರು ಮತ್ತು ಕೆಲವು ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿ ನೋಡುತ್ತೇನೆ. ಕೋವಿಡ್ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಮಕ್ಕಳು ಶಾಲೆಗೆ ಬಂದು ಕಲಿಕೆಯಾಗಬೇಕು, ಒಂದೂವರೆ ವರ್ಷದಿಂದ ಮಕ್ಕಳು ಶಾಲೆಗೆ ಹೋಗಿಲ್ಲ, ನಿಧಾನವಾಗಿ ಅವರು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ಶಾಲೆ ಪ್ರಾರಂಭಿಸುತ್ತಿದ್ದೇವೆ ಎಂದರು.
ಪೋಷಕರು ನಿರ್ಲಕ್ಷ್ಯ ತೋರದೆ, ಹಿಂಜರಿಯದೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ, ಮಕ್ಕಳ ಆರೋಗ್ಯ ಬಗ್ಗೆ ಗಮನ ಇರಲಿ, ಶಾಲೆಗೆ ಹೋಗಿ ಬಂದ ಮೇಲೆ ಮಕ್ಕಳ ಮೇಲೆ ನಿಗಾ ಇರಿಸಿ ಎಂದು ಮುಖ್ಯಮಂತ್ರಿ ಕಿವಿಮಾತು ಹೇಳಿದರು.