Friday, December 27, 2024

Latest Posts

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

- Advertisement -

Political News: ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ.

ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ಧಾರೆ.

ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ ಎಂದರು.

ನಾನು ಯಾರ ಮುಲಾಜಿಗೂ ಹೆದರುವುದಿಲ್ಲ

ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗಬೇಕು ಕಿಡಿಕಾರಿದ್ದರು.

ವಿಪಕ್ಷ ನಾಯಕ ಆಗೋಕೆ ನಂಗ್ಯಾಕೆ ಅರ್ಹತೆ ಇಲ್ಲ

ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ, ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕದ ಎಮ್ಎಲ್ಎಗಳು, ಎಂಪಿಗಳು ನಿಮಗೆ ಬೇಕು. ಆದರೆ ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕ ಆ ಹಳೆ ಮೈಸೂರು ಭಾಗದವರು ಆಗಬೇಕು ಎಂದು ಸ್ವಪಕ್ಷದ ವಿರುದ್ಧ ಗುಡುಗಿದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದ್ದರು.

‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

- Advertisement -

Latest Posts

Don't Miss