Monday, September 9, 2024

Latest Posts

ಮನೆಯಲ್ಲಿ ಪ್ರೀತಿಗೆ ವಿರೋಧ, ಸಾವಿನ ನಿರ್ಧಾರ ತೆಗೆದುಕೊಂಡ ಪ್ರೇಮಿಗಳು

- Advertisement -

Bagalakote News: ಬಾಗಲಕೋಟೆ: ಮದುವೆಗೆ ಪೋಷಕರ ವಿರೋಧ ಹಿನ್ನೆಲೆ, ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣಿಗೆ ಶರಣಾಗಿದ್ದಾರೆ.

ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಡುಗ, ಹುಡುಗಿ ಮನೆಯಲ್ಲಿ ಇಬ್ಬರ ಮದುವೆಗೆ ವಿರೋಧವಿತ್ತೆಂಬ ಕಾರಣಕ್ಕೆ, ಪ್ರೇಮಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳಾಗಿದ್ದು, ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Latest Posts

Don't Miss