Thursday, October 2, 2025

Latest Posts

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

- Advertisement -

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ ಒಳಹರಿವು, ಹೊರಹರಿವು ಹೆಚ್ಚಾಗಿದೆ. ಇದ್ರಿಂದ ಭೀಮಾ ತೀರದ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಮನೆ ಮಠ ಕಳೆದುಕೊಂಡು ಜನರು, ಉಟ್ಟ ಬಟ್ಟೆಯಲ್ಲಿ ಊರು ಬಿಡ್ತಿದ್ದಾರೆ. ನೂರಾರು ಎಕರೆ ಜಮೀನು ಜಲಾವೃತವಾಗಿದೆ.

ಇನ್ನು, ಬೀದರ್ ಜಿಲ್ಲೆಯಲ್ಲಿ ನಿರಂತರ ಮಳೆಗೆ, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಬಸವಕಲ್ಯಾಣ ಐತಿಹಾಸಿಕ ತಿಪುರಾಂತ್ ಕೆರೆ ಒಡೆದು, 3 ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಮಾಂಜ್ರಾ ನದಿ ಪ್ರವಾಹದಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಭಾಲ್ಕಿ- ಔರಾದ್‌ – ಲಾತೂರ್‌ಗೆ ಹಾದು ಹೋಗುವ, ಮುಖ್ಯರಸ್ತೆಯ ಇಂಚೂರ ಸೇತುವೆ ಮುಳುಗಡೆಯಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರೂ ಪರದಾಡುವಂತಾಗಿದೆ.

ಪ್ರವಾಹ ಪೀಡಿತ ಸ್ಥಳಗಳಿಗೆ ಬಸವಕಲ್ಯಾಣ ಶಾಸಕ ಶರಣು ಸಲಗಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈಗಾಗಲೇ ಅಗತ್ಯ ರಕ್ಷಣಾ ಕ್ರಮ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

Latest Posts

Don't Miss