International News: ಆಸ್ಕರ್ ಪ್ರಶಸ್ತಿ ವಿಜೇತ ನಟ, ಲೀ ಸನ್(48) ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕೋರಿಯಾದ ಸೆಂಟ್ರಿಲ್ ಸಿಯೋಲ್‌ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಇವರ ಕಾರ್ ಪಾರ್ಕ್ ಆಗಿತ್ತು. ಇದರಲ್ಲಿ ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ವೇಳೆ ಓರ್ವ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ ಎಂದು ಹೇಳಿದ್ದು, ಹೋಗಿ ನೋಡಿದಾಗ, ಅವರು ನಟ ಲೀ ಸನ್ ಎಂದು ಗೊತ್ತಾಗಿದೆ.
ಪ್ಯಾರಾಸೈಟ್ ಸಿನಿಮಾದ ಮೂಲಕ ಪ್ರಸಿದ್ಧರಾಗಿದ್ದ ಲೀ ಸನ್‌ರನ್ನು ಡ್ರಗ್ಸ್ ಕೇಸ್‌ನಲ್ಲಿ ವಿಚಾರಣೆ ನಡೆಸಲಾಗಿತ್ತು. ಹೀಗಾಗಿ ಆ ಅವಮಾನ ತಾಳಲಾರದೇ, ಲೀ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿತ್ತು. ಇದಕ್ಕೆ ತಕ್ಕಂತೆ, ಲೀ ಮನೆಯಲ್ಲಿ ಆತ್ಮಹತ್ಯೆ ಪತ್ರ ಬರೆದಿಟ್ಟು ಹೋಗಿದ್ದರು ಎಂದು ಲೀ ಪತ್ನಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನು ಕಾರಿನಲ್ಲಿ ಸುಟ್ಟ ಇದ್ದಿಲು ಬ್ರಿಕೇಟ್ ಇದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅವರು ಡ್ರಗ್ಸ್ ಸೇವನೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ.
‘ಶಿವಾನಂದ ಪಾಟೀಲ್ ರೈತರ ಬಗ್ಗೆ ದುರುದ್ದೇಶದಿಂದ ಮಾತನಾಡಿಲ್ಲ, ಸಲುಗೆಯಿಂದ ಮಾತನಾಡಿದ್ದಾರೆ’
‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’