ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಇನ್ನು ಮಾಜಿ ಸಿಎಂ ಕುಮಾರಸ್ವಾಮಿ, ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.
ಇದರೊಂದಿಗೆ ಬಿಜೆಪಿಯ ಹಲವು ನಾಯಕರೂ ಕೂಡಾ ಯಡಿಯೂರಪ್ಪ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.


