Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ನಮ್ಮ ಇಲಾಖೆಯಿಂದ ಮಾಡುತ್ತಿದ್ದೇವೆ. ಸಂಗೀತ, ದೈಹಿಕ ಶಿಕ್ಷಣ ಹಾಗೂ ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಬೇಡಿಕೆ ಇದೆ. ಇಲಾಖೆಯಲ್ಲಿ ಅನುದಾನದ ಕೊರತೆ ಏನೂ ಇಲ್ಲ. ದಸರಾ ಆದ ಬಳಿಕ ಶಿಕ್ಷಕರ ನೇಮಕಾತಿಗೆ ಅನುಮೋದನೆ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು.
ಅಕ್ಟೋಬರ್ 25 ಅಥವಾ ನವೆಂಬರ್ 2ರಂದು ಕೆಇಪಿ ಸಭೆ ಇದೆ. ಈ ಎರಡು ದಿನಾಂಕಗಳ ಪೈಕಿ ಒಂದು ದಿನಾಂಕದಂದು ಸಭೆ ನಡೆಯಲಿದೆ. ಈಗಾಗಲೇ ಅದಕ್ಕೆ ಸಂಬಂಧಿಸಿದಂತೆ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು.
ಶಿಕ್ಷಕರ ನೇಮಕಾತಿ ಸಂಬಂಧ ಸಿಎಂ ಅವರಿಗೆ ಒಂದು ವಾರ ಬಿಟ್ಟು, ಒಂದು ದಿನದ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ. ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಕ್ರಮ ತೆಗೆದುಕೊಳ್ಳೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು.
ಈಗಾಗಲೇ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್ ಹೇಳಿದಂತೆ ನಾವು ಕೇಳುತ್ತೇವೆ. ಕೋರ್ಟ್ ತೀರ್ಮಾನದ ಮೇಲೆ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ನಮಗೆ ಶಿಕ್ಷಕರ ಅಗತ್ಯವಿದೆ. ಅದಕ್ಕೆ ಏನು ಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಬಿಜೆಪಿಯಲ್ಲಿ ಭುಗಿಲೆದ್ದಿದೆ ಪಟ್ಟದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ ಸದಾನಂದ ಗೌಡ
‘ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರಾ,..? ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರಾ..?’