Friday, November 22, 2024

Latest Posts

ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ: ಅಶ್ವಿನಿ ಪುನೀತ್ ಪರ ನಿಂತ ಸಿಎಂ

- Advertisement -

Political News: ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ದರ್ಶನ್ ಫ್ಯಾನ್ ಪೇಜ್ ಗಜಪಡೆ ಎಂಬ ಟ್ವೀಟ್ ಅಕೌಂಟ್‌ನಲ್ಲಿ ಕೀಳಾಗಿ ಪೋಸ್ಟ್ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಘಟನೆಯನ್ನು ಸಂಬೋದಿಸದೇ, ಹೆಣ್ಣಿಗೆ ಅವಮಾನ ಮಾಡುವವರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ ಎಂದು ಸಿಎಂ ಹೇಳಿದ್ದಾರೆ.

ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ. ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್ ಟ್ವೀಟ್ ಮಾಡಿದೆ. ಇಂಥ ಕೀಳು ಮಟ್ಟದ ಟ್ವೀಟ್‌ಗೆ ನೆಟ್ಟಿಗರು ಆಕ್ರೋಶ ಮತ್ತು ಬೇಸರ ಹೊರಹಾಕಿದ್ದಾರೆ.ಅಪ್ಪು ಅಭಿಮಾನಿಗಳು ಕೂಡ, ಕಾನೂನು ಕ್ರಮ ಕೈಗೊಳ್ಳಲೇಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest Posts

Don't Miss