Saturday, July 27, 2024

Latest Posts

ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ , ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ಸಿ‌.ಎಂ.ಸಿದ್ದರಾಮಯ್ಯ ಅಬ್ಬರದ ಬಾಷಣ ಮಾಡಿದ್ದಾರೆ.

ಕೋಲಾರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮುಳಬಾಗಿಲು ವರೆಗೂ ರಸ್ತೆ ಮೂಲಕ ಪ್ರಯಾಣ ಮಾಡಿ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜನರತ್ತ ಕೈ ಬೀಸಿದ ಸಿಎಂ, ಡಿಸಿಎಂ ಹೈದರ್ ದರ್ಗಾಗೆ ಬೇಟಿನೀಡಿ ಬಳಿಕ ರೋಡ್ ಶೋ ನಡೆಸಿದರು , ಬಿರು ಬಿಸಿಲಿನ ನಡುವೆಯೂ ಸಾವಿರಾರು ಜನರು ಗ್ರಾಮಂತರ ಪ್ರದೇಶದಿಂದ ಬಂದು ರೋಡ್ ಶೋ ನಲ್ಲಿ ಬಾಗಿಯಾಗಿದ್ದರು, ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ನಡೆದ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭರ್ಜರಿ ಬಾಷಣ ಮಾಡಿದರು.

ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು, ಸಾಮಾನ್ಯ ಕಾರ್ಯಕರ್ತರಾಗಿ ತಳಮಟ್ಟದಿಂದ ಬೆಳೆದು ಈಗ ಅಭ್ಯರ್ಥಿ ಆಗಿದ್ದಾರೆ ಇವರು ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್,ಅಡುಗೆ ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು.

ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಹೊಸ ಸುಳ್ಳು ಸೃಷ್ಟಿಸಿದ್ದಾರೆ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ. ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಸಿಎಂ ಹಾಗೂ ಡಿಸಿಎಂ ಜೊತೆ ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ರಮೇಶ್ ಕುಮಾರ್ , ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಶಾಸಕ ಶರತ್ ಬಚ್ಚೇಗೌಡ, ಕೊತ್ತೂರು ಮಂಜುನಾಥ್, ಕೆವೈ ನಂಜೇಗೌಡ, ಎಸ್ ಎನ್ ನಾರಾಯಣ ಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..

ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

- Advertisement -

Latest Posts

Don't Miss