Sunday, July 6, 2025

Latest Posts

ದಲಿತರ ಮೀಸಲಾತಿ ರದ್ದು ಹೇಳಿಕೆಗೆ ಆಕ್ರೋಶ: ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

- Advertisement -

Hubli Political News: ಹುಬ್ಬಳ್ಳಿ: ಅಮೇರಿಕಾದ ವಾಷಿಂಗ್ಟನ್ ನಲ್ಲಿ ಭಾರತದಲ್ಲಿ ಹಿಂದುಳಿದ ಹಾಗೂ ದಲಿತರ ಮೀಸಲಾತಿ ರದ್ದು ಪಡಿಸುವ ಇಂಗಿತವನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಅವರ ನಿಲುವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರಮಾಣದ ಪ್ರತಿಭಟನೆ ಮಾಡಿದರು.

ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು.

ಮೀಸಲಾತಿ ರದ್ದು ಕುರಿತು ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಈಗಾಗಲೇ ರಾಹುಲ್​ ಗಾಂಧಿ ಹೇಳಿಕೆ ಖಂಡಿಸಿ ರಾಜ್ಯ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲಿಯೂ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

Latest Posts

Don't Miss