ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್ಡೌನ್(Lockdown) ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್ಡೌನ್ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 20,181 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಬುಧವಾರ ಪತ್ತೆಯಾದ ಪ್ರಕರಣಗಳಿಗಿಂತ ಶೇ.33ರಷ್ಟು ಹೆಚ್ಚಾಗಿದೆ. ನಿನ್ನೆ 4 ಸಾವುಗಳು ಸಹ ದಾಖಲಾಗಿವೆ. ಮುಂಬೈನಲ್ಲಿ ಬುಧವಾರ 15,166 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು.
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಹೊಸ ಪ್ರಕರಣಗಳಲ್ಲಿ, ಶೇ. 85ರಷ್ಟು ಕೇಸ್ಗಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಆದರೆ 1,170 ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ 106 ಮಂದಿ ಆಕ್ಸಿಜನ್ ಸಪೋರ್ಟ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

