ನೀಟ್ ಪರೀಕ್ಷೆಯಲ್ಲಿ ನಡೆದಿರುವ ಲೋಪ ಖಂಡಿಸಿ ಹಾಗೂ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಪ್ರೋಗ್ರೆಸ್ಸಿವ್ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಒಕ್ಕೂಟಗಳು ಗುರುವಾರ ಭಾರತ್ ಬಂದ್ಗೆ ಕರೆ ನೀಡಿವೆ. ಈ ಹಿನ್ನಲೆ ದೇಶಾದ್ಯಂತ ಪ್ರೀಪೈಮಾರಿ, ಶಾಲಾ- ಕಾಲೇಜುಗಳನ್ನು ಬಂದ್ ಮಾಡಲಾಗುವುದು ಎಂದು ಒಕ್ಕೂಟಗಳು ತಿಳಿಸಿವೆ.
ಹೈದರಾಬಾದ್ನಲ್ಲಿ ಒಕ್ಕೂಟದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ತೆಲಂಗಾಣ, ಆಂಧ್ರಪ್ರದೇಶ ಹಾಗೂ ಉತ್ತರ ಭಾರತ ಹಲವು ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿರಲಿದೆ. ಆದರೆ, ಕರ್ನಾಟಕದಲ್ಲಿ ಗುರುವಾರ ಶಾಲಾ-ಕಾಲೇಜುಗಳು ರಜೆ ಇರುವುದು ಕುರಿತು ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಕುರಿತು ಒಕ್ಕೂಟಗಳಾಗಲಿ ಅಥವಾ ಶಿಕ್ಷಣ ಇಲಾಖೆಯಾಗಲಿ ಯಾವುದೇ ಮಾಹಿತಿ ನೀಡಿಲ್ಲ.
ಯುಜಿ ನೀಟ್ ಹಾಗೂ ಯುಜಿ ನೆಟ್ ಪರೀಕ್ಷೆಗಳ ಪಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಯುಜಿ ನೀಟ್ ಫಲಿತಾಂಶವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಈ ಹಿಂದೆ ನಡೆದಿರೋ ಪರೀಕ್ಷೆಯನ್ನು ರದ್ದುಗೊಳಿಸಬೇಕು ಮತ್ತು ಮರು ಪರೀಕ್ಷೆಯನ್ನು ನಡೆಸಬೇಕು ಎಂದು ಪ್ರತಿಪಾದಿಸಿದ್ದಾರೆ. ಇದು 24 ಲಕ್ಷ ಅರ್ಜಿದಾರರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಒಕ್ಕೂಟಗಳು ತಿಳಿಸಿವೆ.



