‘ಪಾದರಾಯ’ ಚಿತ್ರಕ್ಕಾಗಿ ನಡೆಯುತ್ತಿದೆ ಭರ್ಜರಿ ಸಿದ್ದತೆ – 42 ದಿನಗಳ ಕಾಲ ವ್ರತ ಆಚರಿಸುತ್ತಿದ್ದಾರೆ ನಾಯಕ ನಟ ನಾಗಶೇಖರ್

Film News:

ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಸೆಟ್ಟೇರಿದ್ದ ಈ ಚಿತ್ರ ಟೈಟಲ್ ಟೀಸರ್ ಮೂಲಕ ಸಂಚಲನ ಸೃಷ್ಟಿಸಿತ್ತು. ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಸಿನಿಮಾ ತಯಾರಿ ಜೋರಾಗಿಯೇ ನಡೆಯುತ್ತಿದ್ದು, ಸದ್ಯ ಲೇಟೆಸ್ಟ್ ಅಪ್ಡೇಟ್ ಒಂದು ಚಿತ್ರತಂಡದಿಂದ ಹೊರಬಿದ್ದಿದೆ.ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ‘ಪಾದರಾಯ’ ಚಿತ್ರದಲ್ಲಿ ‘ಮೈನಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಚಿತ್ರೀಕರಣಕ್ಕೆ ಹೊರಡುವ ಮುನ್ನ ನಾಯಕ ನಟ ನಾಗಶೇಖರ್ 42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡುತ್ತಿದ್ದಾರೆ. ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ರಿಂದ ಹನುಮ ಮಾಲೆ ಹಾಕಿಸಿಕೊಂಡಿರುವ ನಾಗಶೇಖರ್ 42 ದಿನಗಳ ಕಾಲ ಅಂಜನಾದ್ರಿ ಬೆಟ್ಟದಲ್ಲಿ ವ್ರತವನ್ನು ಆಚರಿಸುತ್ತಿದ್ದಾರೆ.

‘ಪಾದರಾಯ’ ಚಿತ್ರ 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ. ಆರು ರಾಜ್ಯಕ್ಕೆ ಸಂಬಂಧಿಸಿದ ಘಟನೆ ಇದಾಗಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆಗಿರೋದ್ರಿಂದ ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರ್ತಿದೆ. ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಈ ಚಿತ್ರದ ಕಥೆ ನಡೆಯಲಿದೆ. ಸದ್ಯದಲ್ಲೇ ಚಿತ್ರದ ನಾಯಕಿ ಹಾಗೂ ಚಿತ್ರದ ತಾರಾಬಳಗದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.

ಸಂಕ್ರಾಂತಿ ಸಂಭ್ರಮ ಇಮ್ಮಡಿಗೊಳಿಸಲಿದೆ ‘ಸಂಕ್ರಾಂತಿ ತಕಥೈ’ ಹಾಡು

ದೇಶಾದ್ಯಂತ ಬಿಡುಗಡೆಗೆ ಸಜ್ಜಾಗಿದೆ ತೆಲುಗಿನ ವೀರಸಿಂಹರೆಡ್ಡಿ ಸಿನಿಮಾ…!

ಕಣ್ಮನ ಸೆಳೆದ ‘ಕಾಂತಾರ’ಕ್ಕೆ ಶತದಿನೋತ್ಸವದ ಸಂಭ್ರಮ…!

About The Author